ದೂರುದಾರನ ಮನೆಯಿಂದ ತಲವಾರು ವಶಪಡಿಸಿಕೊಂಡ ಪೊಲೀಸರು

ಉಡುಪಿ : ಕೆಲ ದಿನಗಳ ಹಿಂದೆ ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ನಡೆದಿದ್ದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನ ಮನೆಯಿಂದಲೇ ಪೊಲೀಸರು ತಲವಾರು ವಶಪಡಿಸಿಕೊಂಡಿದ್ದಾರೆ.

ಸೆಲೂನಿನಲ್ಲಿ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಚರಣ್ ರಾಜ್(18) ಎಂಬಾತನ ಮನೆಯಲ್ಲಿ ತಲವಾರು ಇರುವ ಬಗ್ಗೆ ಉಡುಪಿ ನಗರ ಠಾಣಾ ಎಸ್ಸೈ ಪುನೀತ್ ಕುಮಾರ್‌ರಿಗೆ ಮಾಹಿತಿ ಬಂದಿದ್ದು, ಅದರಂತೆ ನ್ಯಾಯಾಲಯದಿಂದ ಸರ್ಚ್ ವಾರೆಂಟನ್ನು ಪಡೆದುಕೊಂಡು ಆತನ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದರು.

ಈ ವೇಳೆ ಆತನ ಮನೆಯಲ್ಲಿ ತಲವಾರು ದೊರೆತಿದ್ದು, ಅದರಂತೆ ಆತನ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಾರದ ಹಿಂದೆ ಪ್ರವೀಣ್, ಅಭಿಷೇಕ್, ದೇಶರಾಜ್ ಮತ್ತು ಇತರರು ತಲವಾರಗಳನ್ನು ಹಿಡಿದುಕೊಂಡು ದಾಳಿ ಮಾಡಿ ದ್ವಿಚಕ್ರ ವಾಹನಗಳಿಗೆ ಹಾನಿ ಮಾಡಿದ್ದರೆಂದು ಚರಣ್‌ರಾಜ್‌ ಉಡುಪಿ ನಗರ ಠಾಣೆಗೆ ದೂರು ನೀಡಿದ್ದ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು