ನರಹರಿ ಪರ್ವತದ ಬಳಿ ಚರಂಡಿಯಲ್ಲಿ ಮಾಂಸಕ್ಕಾಗಿ ಉಪಯೋಗಿಸಿದ ಪ್ರಾಣಿಯ ಅವಶೇಷಗಳು ಪತ್ತೆ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಕಲ್ಲಡ್ಕ ರಸ್ತೆಯ ಮಧ್ಯೆ ನರಹರಿ ಪರ್ವತದ ಬಳಿ ಚರಂಡಿಯಲ್ಲಿ ಮಾಂಸಕ್ಕಾಗಿ ಉಪಯೋಗಿಸಿದ ಪ್ರಾಣಿಯ ಅವಶೇಷಗಳು ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಹಲವಾರು ಅನುಮಾನಗಳು ಸೃಷ್ಟಿಯಾಗಿದ್ದು, ಪೋಲೀಸ್ ಇಲಾಖೆ ತನಿಖೆಗೆ ಮುಂದಾಗಿದೆ.

ಈಗಾಗಲೇ ಬಂಟ್ವಾಳ ನಗರ ಪೋಲೀಸ್ ಇನ್ಸ್‌ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ‌. ರಾಮಕೃಷ್ಣ ಅವರು ಸ್ಥಳಕ್ಕೆ ಧಾವಿಸಿದ್ದು, ಮೇಲ್ನೋಟಕ್ಕೆ ಇದು ಕೋಳಿ ಹಾಗೂ ಕುರಿ, ಆಡುಗಳ ಅವಶೇಷಗಳಂತೆ ಕಾಣುತ್ತಿದ್ದು, ಪ್ರಸ್ತುತ ಗೋಹತ್ಯೆಯ ಆರೋಪಗಳು ಕೂಡ ಇರುವುದರಿಂದ ಪಶುಸಂಗೋಪನೆ ಇಲಾಖೆಯ ವೈದ್ಯರ ಮೂಲಕ ಅವಶೇಷಗಳ ಪರೀಕ್ಷೆ ನಡೆಸಿ, ಯಾವ ಪ್ರಾಣಿ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಪೋಲೀಸರು ಸಿದ್ದತೆ ನಡೆಸಿದ್ದಾರೆ.

ಈ ಕುರಿತು ಬಂಟ್ವಾಳ ಶಾಸಕರಿಗೆ ಸ್ಥಳೀಯ ಬಿಜೆಪಿ ಪ್ರಮುಖರೋರ್ವರು ಮಾಹಿತಿ ನೀಡಿದ್ದು ಶಾಸಕರು ಪೋಲೀಸ್ ಇಲಾಖೆಯನ್ನು ಸಂಪರ್ಕಿಸಿ, ಯಾವ ಪ್ರಾಣಿ ಎಂಬುದನ್ನು ಖಚಿತ ಪಡಿಸಿಕೊಂಡು ಗೊಂದಲ ಸೃಷ್ಟಿಯಾಗದಂತೆ ಇತ್ಯರ್ಥಪಡಿಸಲು ಸೂಚಿಸಿದ್ಧಾರೆ ಎನ್ನಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ