ಸರಕಾರಿ ಜಮೀನಿನಲ್ಲಿದ್ದ ಮನೆ ಕೆಡವಿದ ಕಂದಾಯ ಅಧಿಕಾರಿಗಳು – ವೃದ್ಧದಂಪತಿ ಬೀದಿಪಾಲು

ಕಡಬ : ಸರಕಾರಿ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ವೃದ್ಧ ದಂಪತಿ ಆರು ವರ್ಷಗಳಿಂದ ವಾಸವಿದ್ದ ಮನೆಯನ್ನು ತಾಲೂಕು ಕಂದಾಯ ಅಧಿಕಾರಿಗಳು ನೆಲಸಮಗೊಳಿಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಎಂಬಲ್ಲಿ ಬುಧವಾರ ನಡೆದಿದೆ.

ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ವಾಸವಿದ್ದ ಮನೆಯನ್ನು ಏಕಾಏಕಿ ಧ್ವಂಸಗೊಳಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹಟ್ಟಿ ಮೂಲದವರಾದ ಈ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿದ್ದರು‌. ಬಳಿಕ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದರು. ಈ ದಂಪತಿಗೆ ಯಾವುದೇ ಪಿತ್ರಾರ್ಜಿತ ಆಸ್ತಿಯಿರಲಿಲ್ಲ. ಆದ್ದರಿಂದ ಕಾಪಿನಬಾಗಿಲು ಎಂಬಲ್ಲಿನ ಸರಕಾರಿ ಜಾಗದಲ್ಲಿ ಸಣ್ಣ ಮನೆ ಕಟ್ಟಿಕೊಂಡಿದ್ದರು.

ಈ ದಂಪತಿ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿದ್ದರಿಂದ, ಇದರ ವಿರುದ್ಧ ಬೆಳ್ತಂಗಡಿ ತಾಲೂಕಿನ ಅಶೋಕ್‌ ಆಚಾರ್ಯ ಎಂಬವರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರಿ ಜಾಗವನ್ನು ತೆರವುಗೊಳಿಸಲು ಹೈಕೋರ್ಟ್‌ ಸೂಚನೆ ನೀಡಿದ್ದರಿಂದ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ವಾಪಸ್ಸಾಗಿದ್ದರು. ಇಂದು ದಿಢೀರ್ ಆಗಮಿಸಿದ ಅಧಿಕಾರಿಗಳು ಜೇಸಿಬಿ ಯಂತ್ರದ ಬಳಸಿ ಮನೆಯ ಸಾಮಗ್ರಿಗಳನ್ನೆಲ್ಲ ಹೊರಗಿಟ್ಟು ಮನೆಯನ್ನು ಕೆಡವಿ ಹಾಕಿದ್ದಾರೆ.

ಕಡಬ ತಹಶೀಲ್ದಾ‌ರ್ ಪ್ರಭಾಕರ ಖಜೂರೆ, ಆರ್‌ಐ ಪೃಥ್ವಿರಾಜ್, ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !