ಮಲ್ಪೆಯಲ್ಲಿ ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಸವಾರನಿಗೆ ಗಂಭೀರ ಗಾಯ

ಉಡುಪಿ : ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಗುಂಡಿಬೈಲು ನಿವಾಸಿ ಲಕ್ಷ್ಮಣ (60) ಎಂದು ಗುರುತಿಸಲಾಗಿದೆ. ಅವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸಮಾಜಸೇವಕ ಈಶ್ವರ ಮಲ್ಪೆ ಮತ್ತು ತಂಡದವರು ಸಹಕರಿಸಿದರು. ಇವರಿಗೆ ಗುಂಡಿಬೈಲ್‌ನಲ್ಲಿ ವರ್ಕ್ ಶಾಪ್ ಇದೆ ಎನ್ನಲಾಗುತ್ತಿದೆ.

ಮಲ್ಪೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು ಬಸ್‌ನ ಹಿಂಭಾಗ ಜಖಂಗೊಂಡಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ