ಏಕಾಏಕಿ ಕುಸಿದ ಮನೆಯ ಮೇಲ್ಛಾವಣಿ – ಅಜ್ಜಿ, ಮೊಮ್ಮಗಳು ಪ್ರಾಣಾಪಾಯದಿಂದ ಪಾರು

ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನಗರದ ಹೊರವಲಯದಲ್ಲಿರುವ ಬಜಾಲ್ ಫೈಸಲ್ ನಗರದಲ್ಲಿ ಮನೆಯೊಂದು ಕುಸಿದು ಅಜ್ಜಿ – ಮೊಮ್ಮಗಳು ಪ್ರಾಣಾಪಾಯದಿಂದ ಪಾರಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಮಧ್ಯಾಹ್ನ 12.30ಸುಮಾರಿಗೆ ಯಮುನಾ ಎಂಬವರಿಗೆ ಸೇರಿದ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದಿದೆ. ಈ ವೇಳೆ ಯಮುನಾ ಹಾಗೂ ಅವರ ಮೊಮ್ಮಗಳು ಮನೆಯಲ್ಲಿ ಇದ್ದರೆನ್ನಲಾಗಿದೆ. ಆದರೆ ಮೇಲ್ಛಾವಣಿ ಕುಸಿಯುತ್ತಿದ್ದಾಗ ಅವರು ಮನೆಯಿಂದ ಹೊರ ಬಂದ ಕಾರಣ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಕಾರ್ಪೊರೇಟ‌ರ್ ಅಶ್ರಫ್ ಬಜಾಲ್ ಸೇರಿದಂತೆ ಮನಪಾ ಅಧಿಕಾರಿಗಳು, ತಾಲ್ಲೂಕು ವಿಎ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಸಿಂಧೂರ್ ಕಾರ್ಯಾಚರಣೆ ಯಶಸ್ವಿ – ಶಾಸಕರ ನೇತೃತ್ವದಲ್ಲಿ ವಿಶೇಷ ಪೂಜೆ