ಎಲೆಕ್ಟ್ರೀಶಿಯನ್ ವೃತ್ತಿ ಮಾಡುತ್ತಿದ್ದ ಯುವಕ ನೇಣಿಗೆ ಶರಣು

ಉಳ್ಳಾಲ : ಎಲೆಕ್ಟ್ರೀಶಿಯನ್ ವೃತ್ತಿ ಮಾಡುತ್ತಿದ್ದ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಘಟನೆ ನಡೆದಿದೆ.

ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಮೃತ ದುರ್ದೈವಿ

ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದಾನೆ. ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಘಟನಾ ಸ್ಥಳಕ್ಕೆ ಉಳ್ಳಾಲ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ