ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರೊಂದಿಗೆ ರಂಗಾಸಕ್ತರ ಸಂವಾದ

ಉಡುಪಿ : ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಡಾ. ಕೆ ವಿ ನಾಗರಾಜ್ ಮೂರ್ತಿ ಜೊತೆ ಉಡುಪಿಯ ರಂಗ ತಂಡಗಳ ಸದಸ್ಯರು, ರಂಗಾಸಕ್ತರ ಸಂವಾದ ಏರ್ಪಡಿಸಲಾಗಿದೆ.

ಅಕಾಡೆಮಿಯ ಅಧಿಕಾರ ವಹಿಸಿಕೊಂಡ ನಂತರ ಡಾ. ಕೆ.ವಿ ನಾಗರಾಜಮೂರ್ತಿ ಮೊದಲ ಬಾರಿಗೆ ಉಡುಪಿಗೆ ಆಗಮಿಸಲಿದ್ದು, ಉಡುಪಿ ಜಿಲ್ಲೆಯ ಎಲ್ಲಾ ರಂಗ ತಂಡಗಳ ಮತ್ತು ಕಲಾವಿದರ ಸಂವಾದವನ್ನು 7 ಏಪ್ರಿಲ್ 2025 ರಂದು ಉಡುಪಿಯ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಸಂಜೆ 3:30ಕ್ಕೆ ಹಮ್ಮಿಕೊಳ್ಳಲಾಗಿದೆ.

ರಂಗಭೂಮಿಯಲ್ಲಿ ಸಕ್ರಿಯರಾಗಿರುವವರು ನಾಟಕ ಅಕಾಡೆಮಿಯ ಅಧ್ಯಕ್ಷರೊಂದಿಗೆ ನಡೆಯಲಿರುವ ಸಂವಾದದಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕ ನಾಟಕ ಅಕಾಡೆಮಿ ಉಡುಪಿ ಜಿಲ್ಲಾ ಸಂಚಾಲಕ ಸಂತೋಷ್ ನಾಯಕ್ ಪಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ

ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ; ಸವಾರ ಮೃತ್ಯು, ಸಹಸವಾರ ಗಂಭೀರ