ರಿಕ್ಷಾದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಯಂತ್ರ ಕಳವು : ಪ್ರಕರಣ ದಾಖಲು

ಉಡುಪಿ : ಕರಾವಳಿ ಬೈಪಾಸ್ ಬಳಿಯ ಇಸೀ ಲೈಫ್ ಕೃಷಿ ಯಂತ್ರೋಪಕರಣಗಳ ಮಾರಾಟ ಸಂಸ್ಥೆಯ ಗೂಡ್ಸ್ ರಿಕ್ಷಾದಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಯಂತ್ರವನ್ನು ಕಳ್ಳರು ಆ.4ರಂದು ರಾತ್ರಿ ವೇಳೆ ಕಳವು ಮಾಡಿರುವ ಘಟನೆ ನಡೆದಿದೆ.

ತೀರ್ಥಹಳ್ಳಿಯಲ್ಲಿರುವ ಇನ್ನೊಂದು ಶಾಖೆಯಿಂದ ನಾಲ್ಕು ಬಗೆಯ ಸಾಮಾಗ್ರಿಗಳನ್ನು ರಿಕ್ಷಾದಲ್ಲಿ ತುಂಬಿಕೊಂಡು ಉಡುಪಿ‌ಯಲ್ಲಿರುವ ಸಂಸ್ಥೆಯ ಶಾಖೆಗೆ ತಂದು ರಿಕ್ಷಾದಲ್ಲೇ ಇರಿಸಿದ್ದು, ಇದರಲ್ಲಿದ್ದ ಒಂದು ಸಾಮಾಗ್ರಿಯನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.

ಕಳವಾದ ಸೊತ್ತುಗಳ ಒಟ್ಟು ಮೌಲ್ಯ 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ