ಬಿಜೆಪಿ ಅಪಪ್ರಚಾರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ: ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷ ತಬ್ರೇಜ್

ಉಡುಪಿ : ಗಂಗೊಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗಂಗೊಳ್ಳಿಯ ಜನತೆ ತಿರಸ್ಕರಿಸಿ, ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಪಕ್ಷವನ್ನು ಬೆಂಬಲಿಸಿದೆ. ಇದರಿಂದ ಬಿಜೆಪಿ ಪಕ್ಷದ ನಾಯಕರು ಹತಾಶೆಗೆ ಒಳಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ತಬ್ರೇಜ್ ಹೇಳಿದರು.

ಮೊನ್ನೆಯ ದಿನ ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ಅಧಿಕಾರ ಸ್ವೀಕರಿಸಿದ ವೇಳೆ ಕಚೇರಿ ಒಳಗೆ ಗಣಹೋಮ ಮತ್ತು ದುವಾ ಮಾಡಿದ್ದೇವೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಜನತೆಯ ಅಭಿವೃದ್ಧಿಗಾಗಿ ದುವಾ ಪ್ರಾರ್ಥನೆ ಮಾಡಿದ್ದೇವೆ ಹೊರತು ಬೇರೆ ಯಾವುದೇ ದುರುದ್ದೇಶ ಇಲ್ಲ ಎಂದು ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ