ಬೈಕ್‌ನಲ್ಲಿ ಬಂದು ಮಹಿಳೆಯ ಸರ ಎಗರಿಸಿದ ಕಳ್ಳನ ಬಂಧನ

ಕೋಟ : ಬೈಕ್‌ನಲ್ಲಿ ಬಂದು ರಸ್ತೆಯಲ್ಲಿ ಸಾಗುತ್ತಿದ್ದ ಮಹಿಳೆಯ ಕರಿಮಣಿ ಕಸಿದ ಘಟನೆ ಯಡ್ತಾಡಿಯಲ್ಲಿ ಸಂಭವಿಸಿದ್ದು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಸಾಲಿಗ್ರಾಮ ಕಾರ್ಕಡ ಭಟ್ರಕಟ್ಟೆ ನಿವಾಸಿ ಮಂಜುನಾಥ ಮಯ್ಯ ಬಂಧಿತ ಆರೋಪಿ.

ಯಡ್ತಾಡಿ ನಿವಾಸಿ ಸೀತಾ ಬಾಯಿ ಅವರು ಪಕ್ಕದ ಮನೆಯ ಕಾರ್ಯಕ್ರಮಕ್ಕೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಲ್ತಾರು ಪಡುಮನೆ ಸಮೀಪ ಯಡ್ತಾಡಿ ಕಡೆಯಿಂದ ಬೈಕ್‌ನಲ್ಲಿ ಬಂದ ಆರೋಪಿ 28 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಮಂದಾರ್ತಿ ಕಡೆಗೆ ಪರಾರಿಯಾಗಿದ್ದ.

ತತ್‌ಕ್ಷಣ ಸ್ಥಳೀಯರು ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಸುಮಾರು 20 ಕಿ.ಮೀ. ವ್ಯಾಪ್ತಿಯ ವಿವಿಧ ಕಡೆಗಳ ಸಿ.ಸಿ. ಕ್ಯಾಮರಾಗಳನ್ನು ಪೊಲೀಸರು ಪರಿಶೀಲಿಸಿದ್ದು, ಆಗ ಬೈಕ್ ಬಗ್ಗೆ ಮಾಹಿತಿ ದೊರೆತಿದೆ. ಅದರ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

Related posts

40 ಮರಾಠ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

ವ್ಯಾಸರಾಜ ಶ್ರೀಗಳಿಂದ ಸಂಸ್ಥಾನ ಪೂಜೆ

ಮೀನು ವ್ಯಾಪಾರಿಗೆ 90 ಲಕ್ಷ ರೂ.ವಂಚನೆ – ದೂರು ದಾಖಲು