ಈ ಸರ್ಕಾರ ಬಹಳ ದಿನ ಮುಂದುವರಿಯುತ್ತೆ ಅಂತ ಅನ್ನಿಸ್ತಾ ಇಲ್ಲ : ಸಂಸದ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ

ಉಡುಪಿ : ರಾಜ್ಯದಲ್ಲಿ ಸಿಎಂ ಬದಲಾವಣೆ ಮತ್ತು ಡಿಸಿಎಂ ಚರ್ಚೆ ವಿಚಾರವಾಗಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿಗಳು ಬದಲಾಗಬೇಕೆಂದು ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ.
ಶಾಸಕರು ಮಂತ್ರಿಗಳು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಒಬ್ಬ ಮುಖ್ಯಮಂತ್ರಿ ಬಿಟ್ಟು ಎಲ್ಲಾ ಶಾಸಕರನ್ನು ಉಪಮುಖ್ಯಮಂತ್ರಿ ಮಾಡಿ ಎಂದು ಕಾಂಗ್ರೆಸ್‌ನ ಹಿರಿಯರೇ ವ್ಯಂಗ್ಯ ಮಾಡುತ್ತಿದ್ದಾರೆ. ಒಟ್ಟಾರೆ ಕರ್ನಾಟಕ ರಾಜಕಾರಣ ಗೊಂದಲಮಯವಾಗಿದೆ ಎಂದು ಹೇಳಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ಆಡಳಿತ ನೀಡುವ ಬಿಗಿತನವನ್ನು ಸರಕಾರ ಕಳಕೊಂಡಿದೆ. ಮಠಾಧೀಶರು ನೀಡುವ ಹೇಳಿಕೆಗಳು ಆಡಳಿತದ ಮೇಲೆ ಪರಿಣಾಮ ಬೀರಿದೆ. ಒಂದೇ ಒಂದು ಬಡವರ ಕಲ್ಯಾಣ ಯೋಜನೆಗಳು ಜಾರಿಯಾಗುತ್ತಿಲ್ಲ ಎಂದು ಹೇಳಿದರು.

ಈ ಸರ್ಕಾರದ್ದು ಆನೆ ಚರ್ಮ, ದಬ್ಬಾಳಿಕೆಯ ಮಾತುಗಳನ್ನು ಆಡುತ್ತಿದೆ. ಸರಕಾರ ನಡೆಸುವ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ವಾಲ್ಮೀಕಿ ನಿಗಮ ಹಗರಣದಲ್ಲಿ ಆರೋಪಿಗಳನ್ನು ರಕ್ಷಣೆ ಮಾಡಲು ಸರಕಾರ ಮುಂದಾಗಿದೆ ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ ಎಂದು ಹೇಳಿದ್ದಾರೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು