ಉಪ್ಪುಂದದಲ್ಲಿ‌ ಕುಡಿಯುವ ನೀರು ಕಲುಷಿತಗೊಂಡು ಸಾವಿರಕ್ಕೂ ಮಿಕ್ಕಿ ಜನರು ಅಸ್ವಸ್ಥ

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ಕಲುಷಿತಗೊಂಡ ಪರಿಣಾಮ ನೂರಾರು ಜನರು ಅಸ್ವಸ್ಥಗೊಂಡ ಘಟನೆ ಸಂಭವಿಸಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಮತ್ತು 7ನೇ ವಾರ್ಡ್‌ನಲ್ಲಿ ಕುಡಿಯುವ ನೀರು ಕಲುಷಿತಗೊಂಡ ಪರುಣಾಮ ಕರ್ಕಿ ಕಳ್ಳಿ ಮತ್ತು ಮಡಿಕಲ್ ಎನ್ನುವ ಪ್ರದೇಶದಲ್ಲಿ ಗ್ರಾಮಸ್ಥರು ಸಂಪೂರ್ಣ ಅಸ್ವಸ್ಥರಾಗಿದ್ದಾರೆ.

ಕಾಸಿನಾಡಿ ಎಂಬಲ್ಲಿರುವ ನೀರಿನ ಟ್ಯಾಂಕ್‌ನಿಂದ ಈ ಕಲುಷಿತ ನೀರನ್ನು ಗ್ರಾಮಸ್ಥರು ಕುಡಿದಿದ್ದರು. ಇದರ ಪರಿಣಾಮವಾಗಿ ಕರ್ಕಿಕಳಿಯಲ್ಲಿ ಸುಮಾರು 500 ಜನ, ಮಡಿಕಲ್ ನಲ್ಲಿ 600 ಜನ ಅಸ್ವಸ್ಥಗೊಂಡಿದ್ದಾರೆ. ಇಲ್ಲಿನ ವಾರ್ಡ್‌ನ ಪ್ರತಿ ಮನೆಯಲ್ಲೂ 3‌ಕ್ಕೂ ಅಧಿಕ ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. 80ರ ವಯೋವೃದ್ಧರಿಗೆ ರಕ್ತಭೇದಿ ಹಿನ್ನಲೆಯಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದು ಕುಂದಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಕಾಸಿನಾಡಿಯ ಓವರ್ ಹೆಡ್ ನೀರಿನ ಟ್ಯಾಂಕ್ ನೀರು ಸರಬರಾಜನ್ನು ಬಂದ್ ಮಾಡಲಾಗಿದ್ದು ಸೂಕ್ತ ತನಿಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !