ಕೃಷ್ಣನಗರಿಯಲ್ಲಿ ಮೂರು ದಿನಗಳ ಪ್ರಾಚ್ಯವಿದ್ಯಾ ಸಮ್ಮೇಳನ – ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

ಉಡುಪಿ : ಅಕ್ಟೋಬರ್ 24ರಿಂದ 26ರವರೆಗೆ ಪ್ರತಿದಿನ ಬೆಳಗ್ಗೆ 5.30ರಿಂದ 7.30ರವರೆಗೆ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಬಾಬಾ ರಾಮ್‌ದೇವ್‌ ಅವರಿಂದ ಪತಂಜಲಿ ಯೋಗ ಶಿಬಿರ ನಡೆಯಲಿದೆ.ಮೊದಲ ದಿನವಾದ ಇಂದು ರಾಮ್ ದೇವ್ ನೇತೃತ್ವದಲ್ಲಿ ಯೋಗ ಶಿಬಿರ ನಡೆಯಿತು.

ಈ ಶಿಬಿರದಲ್ಲಿ ಬಾಬಾ ರಾಮ್‌ದೇವ್‌ ಅವರು ಯೋಗ, ಆಸನ, ಪ್ರಾಣಾಯಾಮ ಸಹಿತ ಸುದೃಢ ಆರೋಗ್ಯಕ್ಕೆ ಪೂರಕವಾದ ಹಲವು ಸಲಹೆ, ಮಾರ್ಗದರ್ಶನ ನೀಡಿದರು.

ಶ್ರೀ ಕೃಷ್ಣಮಠ ಶ್ರೀ ಪರ್ಯಾಯ ಪುತ್ತಿಗೆ ಮಠದ ಸಹಯೋಗದಲ್ಲಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ಭಾರತೀಯ ವಿದ್ವತ್‌ ಪರಿಷತ್‌ ಆಶ್ರಯದಲ್ಲಿ ಮೂರು ದಿನ ನಡೆಯಲಿರುವ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ನಿತ್ಯ ಬೆಳಗ್ಗೆ ಪತಂಜಲಿ ಯೋಗ ಇರಲಿದೆ.
ಇಂದು ಬಾಬಾ ರಾಮ್‌ದೇವ್‌ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ