ಮೂರು ದಿನಗಳ ಉಚಿತ ವೈದ್ಯಕೀಯ ತಪಾಸಣೆ, ಮಾಹಿತಿ ಜಾಗೃತಿ ಶಿಬಿರ

ಉಡುಪಿ : ಸೇವಾಭಾರತಿ ಸೇವಾಧಾಮ, ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಆಶ್ರಯದಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ 3 ದಿನಗಳ ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣಾ, ಮಾಹಿತಿ ಜಾಗೃತಿ ಶಿಬಿರವನ್ನು ಆಯೋಜಿಸಲಾಗಿದೆ. ಸಪ್ಟೆಂಬರ್ 3, 4 ಮತ್ತು 5ನೇ ತಾರೀಕಿನಂದು ಜಿಲ್ಲಾ ಆಸ್ಪತ್ರೆ ಅಜ್ಜರ‌ಕಾಡು ಉಡುಪಿಯಲ್ಲಿ ಮೂರು ದಿನಗಳ ಕಾಲ ಶಿಬಿರವನ್ನು ಆಯೋಜಿಸಲಾಗಿದೆ ಎಂದು ನಗರಸಭೆ ಸದಸ್ಯ ವಿಜಯ್ ಕೊಡವೂರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಟ್ರಸ್ಟಿ, ನಾಡೋಜ ಡಾ. ಜಿ ಶಂಕರ್ ಉದ್ಘಾಟಿಸಲಿದ್ದಾರೆ. ಸೇವಾ ಭಾರತಿ ಕನ್ಯಾಡಿ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಬಿರದಲ್ಲಿ ಫಲಾನುಭವಿಗಳಿಗೆ ಉಚಿತ ವೈದ್ಯಕೀಯ ತಪಾಸಣೆಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರಿಗೆ ಯೋಗ, ಪ್ರಾಣಾಯಾಮ, ಒತ್ತಡ ಗಾಯ ನಿರ್ವಹಣೆ, ಆಪ್ತ ಸಮಾಲೋಚನೆ, ಮನೋರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಗಾಲಿಕುರ್ಚಿ, ಮೆಡಿಕಲ್ ಕಿಟ್‌ಗಳು ಹಾಗೂ ನೀರಿನ ಹಾಸಿಗೆಗಳನ್ನು ಹಸ್ತಾಂತರಿಸಲಾಗುತ್ತದೆ. ಕಾರ್ಯಾಗಾರದ ಕೊನೆಯ ದಿನವಾದ ಸಪ್ಟೆಂಬರ್ 5 ರಂದು ಗಾಲಿಕುರ್ಚಿ ರ್‍ಯಾಲಿಯ ಮೂಲಕ ಹಾಸಿಗೆ ಹಿಡಿದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಬರುವಂತೆ ಮಾಡಿ ಈ ಮೂಲಕ ಅವರಿಗೆ ಎಲ್ಲರಂತೆ ಬದುಕಲು ಧೈರ್ಯ ತುಂಬುವುದರ ಜೊತೆಗೆ ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಜಾಗೃತಿ ಮೂಡಿಸಲು ಗಾಲಿಕುರ್ಚಿ ರ್‍ಯಾಲಿಯನ್ನು ಬೆಳಗ್ಗೆ 10 ಗಂಟೆಗೆ ಹಾಜಬ್ಬ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿಂದ ಪ್ರಾರಂಭಿಸಿ ಚಿತ್ತರಂಜನ್ ಸರ್ಕಲ್ ಮುಖಾಂತರ ಸಾಗಿ, ಸರ್ವಿಸ್ ಬಸ್‌ಸ್ಟ್ಯಾಂಡ್ ನಗರ ಪಂಚಾಯತ್ ಮುಂಭಾಗದಿದ ಸಾಗಿ ಸಮಾಪ್ತಿಗೊಳಿಸಲಾಗುವುದು.

ಶಿಬಿರದ ಯಶಸ್ಸಿಗೆ ಕೊಡಗೈ ದಾನಿಗಳ ಸಹಕಾರ ಬೇಕೆಂದು ವಿಜಯ್ ಕೊಡವೂರು ವಿನಂತಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ