ಮಿಯ್ಯಾರಿನಲ್ಲಿ ಸಿಡಿಲು ಬಡಿದು ಮೂವರು ಆಸ್ಪತ್ರೆ ದಾಖಲು

ಕಾರ್ಕಳ : ಸಿಡಿಲು ಬಡಿದು ಮೂವರು ಆಸ್ಪತ್ರೆ ದಾಖಲಾದ ಘಟನೆ ಅ. 13ರ ರಾತ್ರಿ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ಸಂಭವಿಸಿದೆ.

ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದ ಪರಿಣಾಮ ಅಂಗಳದಲ್ಲಿ ಕುಳಿತಿದ್ದ ಸುಬ್ರಹ್ಮಣ್ಯ (18), ಸುರೇಶ್ (28) ಹಾಗೂ ಆನಂದ (25) ಎಂಬವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಉಳಿದ ಸದಸ್ಯರು ಮನೆಯೊಳಗಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ