ತ್ಯಾಗ, ಬಲಿದಾನ, ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ : ಶರತ್‌ಕೃಷ್ಣ ಪಡ್ವೆಟ್ನಾಯ

ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ನಡೆದ ಬೃಹತ್ ಹಿಂದೂ ಸಮಾವೇಶದಲ್ಲಿ ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರವರು ಮಾತನಾಡುತ್ತಾ ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ. ಹಿರಿಯ ಕಾರ್ಯಕರ್ತರ ಶ್ರಮದ ಫಲದಿಂದ ಸಂಘಟನೆ ಶಕ್ತಿಯುತವಾಗಿ ಬೆಳೆದಿದೆ. ದೇಶದಲ್ಲಿ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಬೇಕು. ಧರ್ಮ ಉಳಿದರೆ ಮಾತ್ರ ದೇಶ ಉಳಿಯುತ್ತದೆ ಎಂದು ಹೇಳಿದರು.

ದಿಕ್ಸೂಚಿ ಭಾಷಣ ಮಾಡಿದ ಮಂಗಳೂರು ವಿಭಾಗದ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಹಿಂದೂ ಸಮಾಜದ ಮೇಲೆ ನಡೆಯುವ ರಾಜಕೀಯ ಮತ್ತು ಸಾಮಾಜಿಕ ದಾಳಿಯನ್ನು ಖಂಡಿಸಬೇಕು. ಜಾತಿ ವಿಚಾರದಲ್ಲಿ ಹಿಂದೂ ಸಮಾಜ ವಿಂಗಡಣೆಯಾಗಬಾರದು ಎಂದು ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ಉತ್ಸವ ಸಮಿತಿ ಅಧ್ಯಕ್ಷ ಡಾ. ಎಂ. ಎಂ. ದಯಾಕರ್ ಮಾತನಾಡಿ, ನಮ್ಮೊಳಗಿನ ಶಕ್ತಿ ಇನ್ನಷ್ಟು ಬಲಗೊಂಡು ನ್ಯಾಯಮಾರ್ಗದಲ್ಲಿ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ 60 ಹಿರಿಯ ಕಾರ್ಯಕರ್ತರನ್ನು ಗೌರವಿಸಲಾಯಿತು.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ನವೀನ್ ನೆರಿಯಾ, ಡಾ. ಭಾರತಿ, ಜಿ.ಕೆ., ಎಕ್ಸೆಲ್ ಕಾಲೇಜಿನ ಆಡಳಿತ ನಿರ್ದೇಶಕ ಸುಮಂತ್ ಕುಮಾರ್ ಜೈನ್, ಮೊದಲಾದವರು ಉಪಸ್ಥಿತರಿದ್ದರು. ಸಂಪತ್ ಸುವರ್ಣ ಸ್ವಾಗತಿಸಿ ಮೋಹನ್ ಬೆಳ್ತಂಗಡಿ ವಂದಿಸಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ