ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ; ಸವಾರ ಮೃತ್ಯು, ಸಹಸವಾರ ಗಂಭೀರ

ಉಡುಪಿ : ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್‌ನಲ್ಲಿ ಸಂಭವಿಸಿದೆ.

ಮೃತ ಸವಾರನನ್ನು ಸಾಸ್ತಾನ ಐರೋಡಿ ಗೋಳಿಬೆಟ್ಟು ನಿವಾಸಿ ದೀಕ್ಷಿತ್ (24) ಎಂದು ಗುರುತಿಸಲಾಗಿದೆ. ಸಹ ಸವಾರ ಅಭಿಷೇಕ್ ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಿಪ್ಪರ್ ಬ್ರಹ್ಮಾವರದಿಂದ ಕುಕ್ಕೆಹಳ್ಳಿ ಕಡೆಗೆ ಹೋಗುವ ಸಲುವಾಗಿ ಪೇತ್ರಿ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗುವ ವೇಳೆ ಹೆಬ್ರಿ ಕಡೆಯಿಂದ ಬ್ರಹ್ಮಾವರಕ್ಕೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡ ದೀಕ್ಷಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅಭಿಷೇಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ