ಟಿಪ್ಪರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ್ಯು

ಶಿರ್ವ : ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ಸಂಭವಿಸಿದೆ.

ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸುಬ್ರಮಣ್ಯ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಸ್ಥಳೀಯರು ಹಾಗೂ ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಜೆಸಿಬಿ ಮೂಲಕ ಲಾರಿಯನ್ನು ಎತ್ತಿ ಚಾಲಕನ ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.

Related posts

ಸರಕಾರಿ ಇಲಾಖೆಯ ಸಿಬ್ಬಂದಿಗಳೇ ಕಳ್ಳರ ಟಾರ್ಗೆಟ್; ನಿನ್ನೆ ಪೊಲೀಸ್‌ ಕ್ವಾಟ್ರಸ್, ಇಂದು ಮೆಸ್ಕಾಂ ಕ್ವಾಟ್ರಸ್ ‌ನಲ್ಲಿ ಕಳ್ಳತನ‌!

ಸಂಶಯಾಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ವಿದೇಶೀ ಬೋಟ್ ಕೋಸ್ಟ್‌ಗಾರ್ಡ್ ಪೊಲೀಸರ ವಶಕ್ಕೆ- ಮೂವರ ಬಂಧನ

ಶರಣಾದ ನಾಲ್ವರು ನಕ್ಸಲರು ಕಾರ್ಕಳ ನ್ಯಾಯಾಲಯಕ್ಕೆ ಹಾಜರು