ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯ ವಾಹನಗಳಿಗೂ ಸುಂಕ ವಸೂಲಿ : ಸವಾರರ ಆಕ್ರೋಶ

ಪಡುಬಿದ್ರಿ : ಉಡುಪಿ ಜಿಲ್ಲಾಧಿಕಾರಿ ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಹಿತ ಟೋಲ್ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರೂ ಅವರ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲ. ಟೋಲ್ ಅಧಿಕಾರಿಗಳು ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ ಮಾಡುತ್ತಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟೋಲ್ ವಿರುದ್ಧದ ಹೋರಾಟ ಸಮಿತಿಯ ಪ್ರಮುಖರಾದ ಸ್ಥಳೀಯ ನಿವಾಸಿ ಗುಲಾಂ ಮೊಹಮ್ಮದ್ ಇವರ ಖಾತೆಯಿಂದಲೇ ಹಣ ಸುಲಿಯಲಾಗಿದೆ. ಇದು ಗಮನಕ್ಕೆ ಬಂದ ತಕ್ಷಣ ವಾಹನವನ್ನು ಟೋಲ್‌ನ ಗೇಟಲ್ಲೇ ನಿಲ್ಲಿಸಿ ಪ್ರಶ್ನಿಸಿದ್ದಾರೆ. ಸ್ಥಳಕ್ಕೆ ಬಂದ ಟೋಲ್ ಅಧಿಕಾರಿಗಳು ತಪ್ಪಿನ ಅರಿವಾಗಿ ಹಣವನ್ನು ಮರು ಪಾವತಿಸುವುದಾಗಿ ಹೇಳಿದ್ದಾರೆ. ಸ್ಥಳಕ್ಕೆ ಬಂದ ಪಡುಬಿದ್ರಿ ಎಸ್ಸೈ ಎಂ.ಎಸ್.ಪ್ರಸನ್ನ ಟೋಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿ ಸಹಿತ ಜಿಲ್ಲಾ ಎಸ್ಪಿಯವರಿದ್ದ ಸಭೆಯಲ್ಲಿ ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಆದೇಶ ಮಾಡಿದ್ದರೂ ಅವರ ಆದೇಶವನ್ನು ಮೀರಿ ಟೋಲ್ ಪಡೆದಿರುವುದು ಸರಿಯಾದ ಕ್ರಮವಲ್ಲ, ಮುಂದೆ ಇದನ್ನು ಮುಂದುವರಿಸಿದ್ದಲ್ಲಿ ಆಗುವ ಅನಾಹುತಗಳಿಗೆ ನಾವು ಜವಾಬ್ದಾರರಲ್ಲ ಎಂಬುದಾಗಿ ಟೋಲ್ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಗುಲಾಂ ಮುಹಮ್ಮದ್, ನಮ್ಮೆಲ್ಲರ ಹೋರಾಟದ ಫಲವಾಗಿ ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿ ಇದ್ದರೂ, ಕಳ್ಳ ಮಾರ್ಗದಲ್ಲಿ ಟೋಲ್ ವಸೂಲಿ ನಡೆಸಿದ್ದಾರೆ. ನನ್ನ ಗಮನಕ್ಕೆ ಬಂತು, ನಾನು ಪ್ರತಿಭಟಿಸಿದೆ. ಅದೇ ಗಮನಕ್ಕೆ ಬಾರದೆ ಅದೆಷ್ಟೋ ವಾಹನಗಳಿಂದ ವಸೂಲಿ ನಡೆಸಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಸ್ಥಳೀಯ ವಾಹನ ಸವಾರರು ಎಚ್ಚರಗೊಳ್ಳಬೇಕಾಗಿದೆ ಎಂದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು