ನಾಳೆ ಮಂಗಳವಾರ ಜಿಲ್ಲೆಯ ಶಾಲೆ ಮತ್ತು ಪಿಯುಸಿ ತನಕ ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ : 15.07.2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ : 16.07.2024‌ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ