ಜಿಲ್ಲೆಯಾದ್ಯಂತ ಧಾರಾಕಾರ ಮಳೆ : ಮರ ಬಿದ್ದು ಮನೆಗೆ ಹಾನಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಬುಧವಾರ ಬೆಳಿಗ್ಗಿನಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜೂನ್ 26 ಮತ್ತು 27 ರಂದು “ಆರೆಂಜ್ ಅಲರ್ಟ್” ನೀಡಲಾಗಿದೆ, ಜೂನ್ 28 ಮತ್ತು 29 ರಂದು “ಯಲ್ಲೋ ಅಲರ್ಟ್” ನೀಡಲಾಗಿದೆ. ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕಾಪು ತಾಲೂಕಿನ ಮೂಳೂರು ಉದಯ್ ಪೂಜಾರಿ ಎಂಬವರ ಮನೆಗೆ ಇಂದು ಬೆಳಿಗ್ಗೆ ಮರಬಿದ್ದು ಅಪಾರ ಹಾನಿಯುಂಟಾಗಿದೆ. ಮಳೆಗೆ ಬೀಸಿದ ಭಾರಿ ಗಾಳಿಯಿಂದಾಗಿ ಮರ ಬಿದ್ದಿದ್ದು ಬಚ್ಚಲು ಕೋಣೆ, ಶೌಚಾಲಯಕ್ಕೆ ಹಾನಿಯುಂಟಾಗಿದೆ. ಮನೆಯವರು ಹಾಲ್‌ನಲ್ಲಿ ಕುಳಿತಿದ್ದಾಗ ಘಟನೆ ಸಂಭವಿಸಿದ್ದು, ಹಿಂಬದಿಯ ಮರ ಬಿದ್ದ ಪರಿಣಾಮ ಮನೆಯೊಳಗೆ ಇದ್ದವರಿಗೆ ಯಾವುದೇ ಅಪಾಯಗಳುಂಟಾಗಿಲ್ಲ.
ಸಾವಿರಾರು ರೂಪಾಯಿ ನಷ್ಟ ಅಂದಾಜಿಸಲಾಗಿದ್ದು ತಾಲೂಕು ಆಡಳಿತ, ಕಂದಾಯ ಇಲಾಖೆ, ಪುರಸಭೆಗೆ ಮಾಹಿತಿ ನೀಡಿದ್ದಾರೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ