ಪ್ರವಾಸಿಗ ರೆಸಾರ್ಟ್‌ನ ಈಜುಕೊಳಗೆ ಬಿದ್ದು ದಾರುಣ ಸಾವು

ಮಂಗಳೂರು : ಪ್ರವಾಸಿಯೊಬ್ಬರು ನಗರದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು. ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ ಬಂದ ಸಂದರ್ಭ ದುರ್ಘಟನೆ ಸಂಭವಿಸಿದೆ. ನೀರಿಗೆ ಹಾರಿದ ನಂತರ ನಿಶಾಂತ್ ಕೈ ಕಾಲು ಆಡಿಸದ ಕಾರಣ ಸ್ನೇಹಿತ ಹಾಗೂ ಇತರರು ಮೇಲಕ್ಕೆತ್ತಿದ್ದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.

Related posts

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ

ಕಚೇರಿಯ ಎದುರು ನಿಲ್ಲಿಸಿದ್ದ ಬೈಕ್‌ ಕಳವು