ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ – ನಗರದಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು

ಉಡುಪಿ : ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿರುವ ಕಾರಣ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.

ಡಿಸೆಂಬರ್ 28ರಿಂದ 4 ಗಂಟೆಯಿಂದ ಜನವರಿ 1 ರ ರಾತ್ರಿ 9 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಸಹಕರಿಸಲು ಪೊಲೀಸ್ ಇಲಾಖೆ ಕೋರಿದೆ.

ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸಬೇಕು.
ಕಲ್ಸಂಕ ವೃತ್ತ, ಗುಂಡಿಬೈಲು ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುಬೇಕು.
ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ್ ಕಡೆ ಹೋಗುವವರು ಸಿಟಿ ಬಸ್ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರಬೇಕು.

ಕರಾವಳಿ ಜಂಕ್ಷನ್, ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರು (ಆಭರಣ ಮೋಟರ್ಸ್ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರಬೇಕು.

ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು‌ ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರು (ಆಭರಣ ಮೋಟರ್ಸ್) ಎದುರು ತಿರುಗಿಸಿ ಉಡುಪಿಗೆ ಬರುಬೇಕು.

ಮಲ್ಪೆ ಬೀಚ್ ಕಡೆಯಿಂದ ಬರುವವರು ಬಲರಾಮ ಸರ್ಕಲ್‌ನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಸೇರಬೇಕು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ