ಮಂಗಳೂರು : ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ವಶಕ್ಕೆ ಪಡೆದು 73 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದೆ.

ಬಂಧಿತ ಆರೋಪಿಯನ್ನು ಶಮೀರ್ ಪಿ.ಕೆ (42) ಎಂದು ಗುರುತಿಸಲಾಗಿದೆ. ಆತನಿಂದ 738 ಗ್ರಾಂ ಹೈಡ್ರೋವಿಡ್ ಗಾಂಜಾ, ಕಾರು, ಮೊಬೈಲ್ ಫೋನ್ ಸೇರಿದಂತೆ ಒಟ್ಟು 80 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ.
ಶಮೀರ್ ವಿದೇಶದಿಂದ ಹೈಡ್ರೋವಿಡ್ ಗಾಂಜಾವನ್ನು ತರಿಸಿ, ಅದನ್ನು ಕೇರಳ ಮತ್ತು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದನು.
ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆಯನ್ನು ನಡೆಸಲಾಗಿದೆ.

