ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಮತ್ತೊಂದು ಖಾತೆಗೆ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ.

ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿನಾಥ್‌ ಅವರು ಮಣಿಪಾಲದ ಐಸಿಐಸಿಐ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದರು. ಅದರಿಂದ ಜನವರಿ 27ರಿಂದ ಜೂನ್ 20ರ ವರೆಗೆ ಸುಮಾರು 2,08,004ರೂ.ಗಳು ಸುಮಾರು 177 ಸಲ ಬೇರೆ ಬೇರೆ ಕಂತುಗಳಲ್ಲಿ ಗೂಗಲ್‌ ಪೇ ಎಂಬ ಖಾತೆಗೆ ವರ್ಗಾವಣೆಯಾಗಿದೆ.

ಈ ಬಗ್ಗೆ ಸಂಬಂಧಪಟ್ಟ ಬ್ಯಾಂಕ್‌ಗೆ ಹೋಗಿ ಅಧಿಕಾರಿಗಳನ್ನು ವಿಚಾರಿಸಿದಾಗ ಒಟಿಪಿ-ಡೆಬಿಟ್‌ ಕಾರ್ಡ್‌ ಮೂಲಕ ಹಣ ವರ್ಗಾವಣೆಯಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಡಾ| ಗೋಪಿನಾಥ್‌ ಅವರಿಗೆ ವರ್ಗಾವಣೆಗೆ ಸಂಬಂಧಪಟ್ಟ ಯಾವುದೇ ಒಟಿಪಿ ಅಥವಾ ಸಂದೇಶಗಳು ಬಂದಿಲ್ಲ. ಯಾರೋ ಅಪರಿಚಿತ ವ್ಯಕ್ತಿ ಅವರ ಗಮನಕ್ಕೆ ಬಾರದೆ ಅವರ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾಯಿಸಿದ್ದಾರೆ ಎಂದು ಅವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ