ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ

ಕೋಟ : ಟಿಟಿ ವಾಹನ ಪಲ್ಟಿ ಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಹೈಸ್ಕೂಲ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಕೇರಳದಿಂದ ಕೊಲ್ಲೂರಿಗೆ ಪ್ರವಾಸಕ್ಕೆ ಹೊರಟ್ಟಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಹೊಡೆದು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ. ಈ ವೇಳೆ ವಾಹನದಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಆಂಬುಲೆನ್ಸ್‌ನಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಿದರು.

ಕೋಟ ಠಾಣಾ ಎಸ್ಸೈ ಸುಧಾ ಪ್ರಭು ಸಿಬ್ಬಂದಿಯೊಡನೆ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ, ಉದ್ಯಮ ಮತ್ತು ಆಹಾರ ಮೇಳ