ತುಷಾರ್ ಗಾಂಧೀ ಮಂಗಳೂರಿಗೆ

ಮಂಗಳೂರು : ಮಹಾತ್ಮ ಗಾಂಧೀಜಿಯವರ ಮರಿಮಗ ಮತ್ತು ಖ್ಯಾತ ಸಾಮಾಜಿಕ ಚಿಂತಕ ತುಷಾರ್ ಗಾಂಧೀಯವರು ಸೆ.20ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 10.30ಕ್ಕೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ತುಷಾರ್ ಗಾಂಧೀಯವರು ‘ಇಂದಿನ ಯುವಜನತೆಗೆ ಗಾಂಧೀ ವಿಚಾರಧಾರೆಯ ಪ್ರಸ್ತುತತೆ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡುವರು.
ಸಮಾರಂಭವನ್ನು ತುಷಾರ್ ಗಾಂಧೀಯವರು ಉದ್ಘಾಟಿಸುವರು. ಸಭಾಪತಿ ಯು. ಟಿ. ಖಾದರ್ ಮುಖ್ಯ ಅತಿಥಿಯಾಗಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪಿ.ಎಲ್. ಧರ್ಮ ವಹಿಸಲಿದ್ದಾರೆ. ಕರ್ನಾಟಕ ಗಾಂಧೀ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ ದಿಕ್ಸೂಚಿ ಭಾಷಣ ಮಾಡುವರು. ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನದ ಸಂಸ್ಥಾಪಕ ಪ್ರಮೋದ್ ಕುಮಾರ್ ರೈಯವರು ರಚಿಸಿರುವ ‘ಆನ್ ದ ಟ್ರೈಲ್ ಆಫ್ ಗಾಂಧೀಸ್ ಪುಟ್‌ಸ್ಟೆಪ್ಸ್’ ಹಾಗೂ ‘ಬಿಪೋರ್ ಐ ರಿಟರ್ನ್ ಟು ದ ಸೊಲ್’ ಕೃತಿಗಳನ್ನು ನಿಟ್ಟೆ ವಿ. ವಿ. ಸಹ ಕುಲಾಧಿಪತಿ ಡಾ. ಶಾಂತರಾಮ ಶೆಟ್ಟಿಯವರು ಈ ಸಂದರ್ಭ ಬಿಡುಗಡೆಗೊಳಿಸುವರು.

ಕರ್ನಾಟಕ ಗಾಂಧೀ ಸ್ಮಾರಕ ನಿಧಿ, ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರತಿಷ್ಠಾನದ ಪ್ರಮೋದ್ ಕುಮಾರ್ ರೈ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ