ಮತ್ತಿಬ್ಬರು ಬಾಂಗ್ಲಾ ಅಕ್ರಮ ವಲಸೆಗಾರರು ವಶಕ್ಕೆ

ಕಾರ್ಕಳ : ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಕಾರ್ಕಳ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಗುರುವಾರ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ.

ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಓರ್ವನನ್ನು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಮಂದಿ ಅಕ್ರಮ ವಲಸೆಗಾರರಿರುವ ಮಾಹಿತಿ ಬಂಧಿತರಿಂದ ಸಿಕ್ಕಿದ್ದು, ಅದರಂತೆ ತೀವ್ರ ವಿಚಾರಣೆ ನಡೆಯುತ್ತಿದೆ. ಕಾರ್ಕಳದಲ್ಲಿ ವಶಕ್ಕೆ ಪಡೆದವರನ್ನು ಗುರುವಾರ ಮಹಜರು ನಡೆಸಿ ಬಂಧಿಸಲಾಗುವುದು ಎಂದು ಎಸ್ಪಿ ಡಾ। ಅರುಣ್ ಕೆ.ತಿಳಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ