ಕೋಡಿ ಬೀಚ್‌ನಲ್ಲಿ ನೀರಿಗಿಳಿದ ಮೂವರಲ್ಲಿ ಇಬ್ಬರು ನೀರುಪಾಲು, ಓರ್ವನ ರಕ್ಷಣೆ..!

ಉಡುಪಿ : ಬೀಚ್‌ಗೆ ತೆರಳಿದ್ದ ಮೂವರು ಸಹೋದರರ ಪೈಕಿ ಇಬ್ಬರು ನೀರುಪಾಲಾದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕೋಡಿ ಬೀಚ್‌‌ನಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಇಬ್ಬರು ನೀರುಪಾಲಾಗಿದ್ದರೆ ಮತ್ತೋರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆಯವರೊಂದಿಗೆ ಕೋಡಿ ಬೀಚ್‌ಗೆ ತೆರಳಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.

ಸಂಜೆ ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ಮಕ್ಕಳೊಂದಿಗೆ ಕೋಡಿ ಬೀಚ್‌ಗೆ ಬಂದಿದ್ದರು.

ಈ ಸಂದರ್ಭ ದಂಪತಿ ಪುತ್ರರಾದ ಧನರಾಜ್‌ (23) ದರ್ಶನ್‌ (18) ಹಾಗೂ ಧನುಷ್‌ ನೀರಿಗಿಳಿದಿದ್ದಾರೆ. ಈ ಸಂದರ್ಭ ಸಮುದ್ರದ ಅಲೆಗಳಿಗೆ ಸಿಕ್ಕಿ ದರ್ಶನ್, ಧನರಾಜ್‌ ನೀರುಪಾಲಾಗಿದ್ದಾರೆ.

ಧನುಷ್‌‌ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮಕ್ಕಳನ್ನು ಕಳಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ