ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯ

ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ರಾಷ್ಟ್ರೀಯ ಹೆದ್ದಾರಿ ನಾಗೂರು ಸಮೀಪ ಸಂಭವಿಸಿದೆ.

ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ನಾಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗಳೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.

Related posts

ಷೇರು ವಹಿವಾಟಿನ ಬಗ್ಗೆ ಸಲಹೆ ನೀಡುವುದಾಗಿ ಯುವಕನಿಗೆ ವಂಚನೆ

ಉಳ್ಳಾಲದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತಸ್ರಾವ ಅಸ್ವಸ್ಥತೆ ಚಿಕಿತ್ಸಾಲಯ ಉದ್ಘಾಟನೆ – ಆಶಾ ಕಾರ್ಯಕರ್ತರಿಗಾಗಿ ಕಾರ್ಯಾಗಾರ