ಪರೀಕ್ಷೆ ಮುಗಿಸಿ ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ನೀರಲ್ಲಿ ಮುಳುಗಿ ಮೃತ್ಯು

ಬೈಂದೂರು : ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ.

ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿಯ ಶಾನು ಮೊಹಮ್ಮದ್ ಶಫಾನ್ (13) ಮೃತಪಟ್ಟ ಬಾಲಕರಾಗಿದ್ದಾರೆ. ಇವರು ಪರೀಕ್ಷೆ ಮುಗಿಸಿ ಮನೆಯಲ್ಲಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಸರಿಯಾಗಿ ಈಜಲು ಬಾರದ ಇವರು ಮಳೆಯಲ್ಲೇ ಆಟವಾಡಲು ನೀರಿಗೆ ಇಳಿದಿದ್ದಾರೆ. ವ್ಯಾಪಕ ಮಳೆಯ ಕಾರಣ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಬಾಲಕರು ನೀರಿನಲ್ಲಿ ಮುಳುಗುತ್ತಿದ್ದಾಗಲೂ ಯಾರೂ ರಕ್ಷಣೆಗೆ ಬರಲಿಲ್ಲ ಎಂದು ತಿಳಿದುಬಂದಿದೆ.
ಯಡ್ತರೆ ಗ್ರಾಮದವರಾದ ಇವರು ಬೈಂದೂರಿನ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳವಾರ ತಡರಾತ್ರಿವರೆಗೂ ಹುಡುಕಾಟ ನಡೆಸಿದ್ದ ಬೈಂದೂರು ಪೊಲೀಸರಿಗೆ ಮೊದಲು ಸೇನೇಶ್ವರ ದೇಗುಲ ಹಿಂಬದಿಯ ಕೆರೆ ಸಮೀಪ ಸೈಕಲ್ ಸಿಕ್ಕಿತ್ತು. ಬಳಿಕ ಕೆರೆಯಲ್ಲಿ ಹುಡುಕಾಡಿದಾಗ ಇಬ್ಬರ ಮೃತದೇಹ ಪತ್ತೆಯಾಯಿತು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು