ಉಡುಪಿ ವಕೀಲರ ಸಂಘದ ಪಂದ್ಯಾಕೂಟ – ಟ್ರೋಫಿ ಅನಾವರಣ

ಉಡುಪಿ : ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ಪ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ) ಟೂರ್ನಿಯನ್ನು ಮಾರ್ಚ್ 1 ಮತ್ತು 2 ರಂದು ಆಯೋಜಿಸಿದೆ.

ಈ ಪಂದ್ಯಾಕೂಟದ ಟ್ರೋಫಿಯನ್ನು ಇಂದು ಉಡುಪಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಧೀಶ ಕಿರಣ್. ಎಸ್. ಗಂಗಣ್ಣನವ‌ರ್ ಅನಾವರಣಗೊಳಿಸಿದರು.

ಪಂದ್ಯಾಕೂಟವನ್ನು ಮಾರ್ಚ್ 1ರ ಸಂಜೆ 4 ಗಂಟೆಗೆ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ಕಾಮೇಶ್ವರ್ ರಾವ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಇ.ಎಸ್.ಇಂದಿರೇಶ್ ವಹಿಸಲಿದ್ದು, ಕರ್ನಾಟಕ ಹೈಕೋರ್ಟಿನ ಇನ್ನೋರ್ವ ನ್ಯಾಯಮೂರ್ತಿ ರಾಜೇಶ್ ರೈ ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಮಾರ್ಚ್ 2ರ ಸಂಜೆ 7 ಗಂಟೆಗೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸಮಾರೋಪ ಭಾಷಣ ಮಾಡಲಿದ್ದು, ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿರುವರು.ಟ್ರೋಫಿ ಅನಾವರಣ ಸಂದರ್ಭ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಜೇಶ ಎ.ಆರ್. ವಿವಿಧ ಉಪ-ಸಮಿತಿಗಳ ಸಂಚಾಲಕರಾದ ಎಂ. ಶಾಂತಾರಾಮ್ ಶೆಟ್ಟಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ