ಉಡುಪಿ ನವೆಂಬರ್ 23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ

ಉಡುಪಿ : ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನವಂಬರ್ 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ, ಕುಂದಾಪುರದ ಅಮಾಸೆಬೈಲು ಹಾಗೂ ಕಾರ್ಕಳ ತಾಲೂಕಿನ ಕೆರ್ವಾಶೆ, ಈದು, ನಲ್ಲೂರು, ನಿಟ್ಟೆಯ ತಲಾ ಒಂದು ಸ್ಥಾನಗಳಿಗೆ ಹಾಗೂ ನೀರೆ ಗ್ರಾಪಂನ ಮೂರು ಸ್ಥಾನಗಳಿಗೆ ನವಂಬರ್ 23ರಂದು ಮತದಾನ ನಡೆಯಲಿದೆ.

ಚುನಾವಣೆಗೆ ನವಂಬರ್ 6ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ನವಂಬರ್12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 15 ನಾಮಪತ್ರ ಹಿಂದೆಗೆತಕ್ಕೆ ಕೊನೆಯ ದಿನ.

ಅಗತ್ಯ ಬಿದ್ದರೆ ನವಂಬರ್ 23ರ ಶನಿವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. 26ರಂದು ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ