ಜಿಲ್ಲೆಯ ಎಲ್ಲ ಹೋಮ್‌ಸ್ಟೇ, ರೆಸಾರ್ಟ್ಸ್ ಮಾಲಕರ ಸಭೆ ಕರೆದ ಜಿಲ್ಲಾಧಿಕಾರಿ

ಉಡುಪಿ : ಉಡುಪಿ ಜಿಲ್ಲೆ ಒಂದು ಉತ್ತಮ ಪ್ರವಾಸಿ ಕೇಂದ್ರವಾಗಿದ್ದು, ಇಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅವರ ಸುರಕ್ಷತೆಗಾಗಿ ಸರಕಾರದಿಂದ ತಿಳಿಸಲಾದ ಸೂಚನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಮಾರ್ಚ್ 20ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಹೋಮ್‌ಸ್ಟೇ, ರೆಸಾರ್ಟ್ಸ್, ಹೌಸ್‌ಬೋಟ್, ಪ್ರವಾಸಿ ಬೋಟ್, ಕಯಾಕ್ (ನೊಂದಾಯಿತ ಹಾಗೂ ನೊಂದಣಿಗೊಳ್ಳದ) ಮಾಲಕರ ಸಭೆಯೊಂದನ್ನು ಕರೆಯಲಾಗಿದೆ.

ಈ ಸಭೆಗೆ ಎಲ್ಲಾ ಹೋಮ್‌ಸ್ಟೇ, ರೆಸಾರ್ಟ್ಸ್, ಹೌಸ್ ಬೋಟ್, ಪ್ರವಾಸಿ ಬೋಟ್, ಕಯಾಕ್ ಮಾಲಕರು ತಪ್ಪದೇ ಹಾಜರಾಗುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ವೈದ್ಯಕೀಯ ಶಿಕ್ಷಣದಲ್ಲಿ ಆಧುನಿಕ VR-ಆಧಾರಿತ ಕೌಶಲ ತರಬೇತಿಗೆ ಮೆಡಿಸಿಮ್ ವಿಆರ್‌ನೊಂದಿಗೆ ಮಾಹೆ ಒಪ್ಪಂದ

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ