ಉಡುಪಿ : ಉಡುಪಿ ಜಿಲ್ಲೆಯಿಂದ ಮಹಾ ಕುಂಭ ಮೇಳಕ್ಕೆ ಪ್ರಯಾಗ್ ರಾಜ್‌ಗೆ ತೆರಳಿರುವವರಿಗೆ ಆಯೋಜಿಸಲಾದ “ಉಡುಪಿ – ಪ್ರಯಾಗ್ ರಾಜ್” ವಿಶೇಷ ರೈಲಿಗೆ ಇಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿ ನಿಶಾನೆ ತೋರಿಸಿ ಚಾಲನೆ ನೀಡಿದರು.
ಮಹಾ ಕುಂಭ ಮೇಳಕ್ಕೆ ತೆರಳುತ್ತಿರುವ ಕಾಪು ವಿಧಾನಸಭಾ ಕ್ಷೇತ್ರದ ಸುಮಾರು 170 ಜನರಿಗೆ ಕಾಪು ಶಾಸಕರು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮತ್ತಿತರರು ಉಪಸ್ಥಿತರಿದ್ದರು.