ಉಡುಪಿ – ಪ್ರಯಾಗ್ ರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀಗಳಿಂದ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯಿಂದ ಮಹಾ ಕುಂಭ ಮೇಳಕ್ಕೆ ಪ್ರಯಾಗ್ ರಾಜ್‌ಗೆ ತೆರಳಿರುವವರಿಗೆ ಆಯೋಜಿಸಲಾದ “ಉಡುಪಿ – ಪ್ರಯಾಗ್ ರಾಜ್” ವಿಶೇಷ ರೈಲಿಗೆ ಇಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿ ನಿಶಾನೆ ತೋರಿಸಿ ಚಾಲನೆ ನೀಡಿದರು.

ಮಹಾ ಕುಂಭ ಮೇಳಕ್ಕೆ ತೆರಳುತ್ತಿರುವ ಕಾಪು ವಿಧಾನಸಭಾ ಕ್ಷೇತ್ರದ ಸುಮಾರು 170 ಜನರಿಗೆ ಕಾಪು ಶಾಸಕರು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮತ್ತಿತರರು ಉಪಸ್ಥಿತರಿದ್ದರು.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ