ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಪ್ರಾಧಿಕಾರದ ಸಭಾಂಗಣದಲ್ಲಿ ನಡೆಯಿತು.


ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿ, ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಕೈಗಾರಿಕಾ ವಲಯದಲ್ಲಿ ವಾಸ್ತವ್ಯದ ಉದ್ದೇಶಾಕ್ಕಾಗಿ 10 ಸೆಂಟ್ಸ್ ಜಾಗವನ್ನು ಕನ್ವರ್ಷನ್ ಹಾಗೂ ಏಕ ವಿನ್ಯಾಸ ಮಾಡಲು ಹಿಂದೆ ಅವಕಾಶವಿತ್ತು. ಈಗ ಒಂದು ವರ್ಷಗಳಿಂದ 10 ಸೆಂಟ್ಸ್ ಜಾಗವನ್ನು ಕನ್ವರ್ಷನ್ ಹಾಗೂ ಏಕವಿನ್ಯಾಸ ಮಾಡಲು ಅವಕಾಶ ನೀಡುತ್ತಿಲ್ಲ ಇದರಿಂದ ಅನೇಕ ಕಡತಗಳು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಾಕಿಯಾಗಿದ್ದು ಇದರಿಂದ ಜನರು ಪರದಾಡುವಂತಾಗಿದೆ. ಈ ಬಗ್ಗೆ ಇಲಾಖಾಧಿಕಾರಿಗಳು ಗಮನಹರಿಸಬೇಕು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿದ್ದು ಕಾಮಗಾರಿಗಳನ್ನು ಕೂಡಲೇ ಅನುಷ್ಠಾನಗೊಳಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಹೇಶ್ ಚಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ