ಉಡುಪಿ ನಗರಾಭಿವೃದ್ದಿ ಪ್ರಾಧಿಕಾರ ಅರ್ಜಿಗಳ ಬಗ್ಗೆ ಶಾಸಕ ಯಶ್‌ಪಾಲ್ ಸುವರ್ಣ ಅಹವಾಲು ಸ್ವೀಕಾರ

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅರ್ಜಿಗಳ ಬಗ್ಗೆ ಜುಲೈ 20 ಶನಿವಾರ ಪೂರ್ವಾಹ್ನ 11.30 ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಸಾರ್ವಜನಿಕರು ಪ್ರಾಧಿಕಾರದಲ್ಲಿ ಬಾಕಿ ಉಳಿದಿರುವ ಅರ್ಜಿಗಳು, ಸಮಸ್ಯೆಗಳ ಬಗ್ಗೆ ಶಾಸಕರಿಗೆ ಅಹವಾಲು ನೀಡಬಹುದಾಗಿದ್ದು, ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಶಾಸಕರ ಕಚೇರಿಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ