ಉಳಾಯಿಬೆಟ್ಟು ದರೋಡೆ ಪ್ರಕರಣ : ಮತ್ತೆ ಮೂವರ ಸೆರೆ

ಮಂಗಳೂರು : ಉಳಾಯಿಬೆಟ್ಟು ಕಾಯರ್‌ಪದವಿನಲ್ಲಿ ಜೂ. 21ರಂದು ರಾತ್ರಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಒಟ್ಟು ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಅವರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಗ್ರಾಮಾಂತರ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ.

ಕೇರಳ ತ್ರಿಶೂರ್ ನಿವಾಸಿಗಳಾದ ಡೆವಿನ್, ಗಾಡ್ವಿನ್, ಅಮಲ್‌ಕೃಷ್ಣ ಬಂಧಿತರು. ಈ ಪ್ರಕರಣದಲ್ಲಿ ಈಗಾಗಲೇ ಉಪ್ಪಳ ಬಾಲಕೃಷ್ಣ ಶೆಟ್ಟಿ, ಪೆರುವಾಯಿ ರೇಮಂಡ್ ಡಿ’ಸೋಜಾ, ನೀರುಮಾರ್ಗ ನಿವಾಸಿಗಳಾದ ರಮೇಶ್, ವಸಂತ್ ಕುಮಾರ್, ತಿರುವನಂತಪುರದ ಜಾನ್‌ಬಾಸ್ಕೋ, ತೃಶೂರ್‌ನ ಶಿಜೋ ದೇವಸಿ, ಸತೀಶ್ ಬಾಬು, ಶಾಕೀರ್ ಹುಸೇನ್, ಸಜೀಶ್ ಎಂ., ವಿನೋಜ್ ಪಿ.ಕೆ., ಕಾರು ಚಾಲಕ ಬಿಪಿನ್‌ರಾಜ್‌ ಎಂಬವರನ್ನು ಬಂಧಿಸಲಾಗಿತ್ತು.

ಕೇರಳ ತ್ರಿಶೂರ್‌ನಿಂದ ಬಂಧಿಸಲಾದ ಮೂರು ಆರೋಪಿಗಳಿಂದ ಚಿನ್ನಾಭರಣ, ನಗದು ವಶಪಡಿಸಿಕೊಳ್ಳಲಾಗಿದೆ. ಇನ್ನು ಮೂರು ಆರೋಪಿಗಳ ಬಂಧನ ಬಾಕಿ ಇದೆ. ದರೋಡೆಕೋರರು ಮನೆಯವರನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದರು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ