ಉಳ್ಳಾಲ ಖಾಝಿ ಅಸೈಯದ್ ಫಝಲ್ ಕೋಯಮ್ಮ ತಂಙಳ್ ಹೃದಯಾಘಾತದಿಂದ ನಿಧನ

ಉಳ್ಳಾಲ : ಕೂರತ್ ತಂಙಳ್ ಎಂದೇ ಪ್ರಸಿದ್ಧರಾಗಿರುವ ಉಳ್ಳಾಲ ಖಾಝಿ, ಅಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ(65) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಸ್ವಗೃಹದಲ್ಲಿ ಹೃದಯಾಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಮಧ್ಯಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಸಿದ್ದರಾಗುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಅವರ ಪಾರ್ಥಿವ ಶರೀರವು ಸಂಜೆ 7 ಗಂಟೆ ಸುಮಾರಿಗೆ ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತಲುಪಲಿದೆ. ಆ ಬಳಿಕ ಪಾರ್ಥಿವ ಶರೀರವನ್ನು ಕಡಬ ತಾಲೂಕಿನ ಕೂರತ್‌ಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ರಾತ್ರಿ 9ಗಂಟೆ ಸುಮಾರಿಗೆ ದಫನ ಕಾರ್ಯ ನೆರವೇರಲಿದೆ ಎಂದು ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ತಿಳಿಸಿದ್ದಾರೆ. ಕೂರತ್ ತಂಙಳ್‌ ಅವರು 2014ರಲ್ಲಿ ತಾಜುಲ್ ಉಲಮಾ ನಿಧನರಾದ ಬಳಿಕ ಉಳ್ಳಾಲ ಖಾಝಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಕಡಿದು ಬಿಸಾಡಿದ ಬಾಳೆ ದಿಂಡಿನಲ್ಲಿ ಚಿಗುರುಡೆದ ಬಾಳೆಗೊನೆ