ಟೀಮ್ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಅ. 25 ಹಾಗೂ 26 ರಂದು ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಸಾಧನ ವಿತರಣೆ..!!

ಉಡುಪಿ : ಟೀಮ್ ಈಶ್ವರ್ ಮಲ್ಪೆ ನೇತೃತ್ವದಲ್ಲಿ ವಿಘ್ನಹರ್ತ ಸಂಸ್ಥೆಯ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಸಾಧನ ವಿತರಣೆ ಅಕ್ಟೋಬರ್ 25 ಮತ್ತು 26 ರಂದು ಉಡುಪಿಯ ವಿಘ್ನಹರ್ತ ಶ್ರವಣ ಚಿಕಿತ್ಸಾಲಯದಲ್ಲಿ ಆಯೋಜಿಸಲಾಗಿದೆ.

ಟೀಮ್ ಈಶ್ವರ್ ಮಲ್ಪೆ ತಂಡ ಅನೇಕ ಸಾಮಾಜಿಕ ಕಾರ್ಯವನ್ನು ಮುನ್ನಡೆಸಿಕೊಂಡು ಬರುತ್ತಿದ್ದು ಈಗ ವಿಘ್ನಹರ್ತ ಶ್ರವಣ ಚಿಕಿತ್ಸಾಲಯ ಸಹಯೋಗದೊಂದಿಗೆ ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಹಮ್ಮಿಕೊಂಡಿದ್ದಾರೆ.

ಟೀಮ್ ಈಶ್ವರ್ ಮಲ್ಪೆಯವರು ಶ್ರವಣದ ಯಂತ್ರಕ್ಕೆ ತಗಲುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸುತ್ತಿದ್ದು, ಶ್ರವಣ ದೋಷ ಸಮಸ್ಯೆಯಿಂದ ಬಳಲುತ್ತಿರುವವರು ಈ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9902344399 ಸಂಪರ್ಕಿಸಬಹುದು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ