ಅವೈಜ್ಞಾನಿಕ ಕಾಮಗಾರಿಗೆ ಕುಸಿದ ಕೆರೆ ದಂಡೆ

ಉಡುಪಿ : ಪರ್ಕಳ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರುಗಡೆ ನಿರ್ಮಾಣ ಹಂತದಲ್ಲಿರುವ ಕೆರೆಯ ದಂಡೆ ಈಗ ಮತ್ತೆ ಕುಸಿದಿದೆ.

ಕಳಪೆ ಮತ್ತು ಅವೈಜ್ಞಾನಿಕ ಕಾಮಗಾರಿಯಿಂದ ಹೀಗಾಗಿದೆ. ಈ ಕೆರೆ ದಂಡೆ ನಿರ್ಮಾಣ ಕಾರ್ಯ ಆರಂಭದಿಂದ 4ನೇ ಬಾರಿಗೆ ಕುಸಿಯುತ್ತಿದೆ. ಸರಕಾರ 2 ಕೋ.ರೂ. ಅನುದಾನವನ್ನು ನೀಡಿದ್ದು, ಅನುದಾನವನ್ನು ನೀರಲ್ಲಿ ಹೋಮ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.

ಕೆರೆ ನಿರ್ಮಾಣಕ್ಕೆ ಸಂಬಂಧಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೆ, ಮಣ್ಣು ಪರೀಕ್ಷೆಯನ್ನು ವ್ಯವಸ್ಥಿತವಾಗಿ ಮಾಡದೆ ಅವೈಜ್ಞಾನಿಕವಾಗಿ ಕಾಮಗಾರಿ ನಿರ್ವಹಿಸಿದ ಪರಿಣಾಮ ಈ ರೀತಿ ದುರಂತ ಸಂಭವಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಣ್ಣನೀರಾವರಿ ಇಲಾಖೆ ವತಿಯಿಂದ ಕಾಮಗಾರಿ ನಿರ್ವಹಿಸಲಾಗುತ್ತಿದ್ದು, ತತ್‌ಕ್ಷಣ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ