ರಿಕ್ಷಾ ಬಾಡಿಗೆ ವಿಚಾರದಲ್ಲಿ ಗಲಾಟೆ; ಆಟೋ ಚಾಲಕರ ತಂಡದಿಂದ ಆಟೋ ಚಾಲಕನ ಮೇಲೆಯೇ ಹಲ್ಲೆ

ಉಡುಪಿ : ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರವಾಗಿ ಆಟೋ ಚಾಲಕರ ತಂಡವು ಆಟೋ ಚಾಲಕನ ಮೇಲೆಯೇ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಪ್ರತಾಪ್ ಚಂದ್ರ, ಹಲ್ಲೆಗೊಳಗಾದ ರಿಕ್ಷಾ ಚಾಲಕ.

ಉಡುಪಿ ನಗರದ ಸಿಟಿ ಬಸ್‌ಸ್ಟ್ಯಾಂಡ್ ವ್ಯಾಪ್ತಿಯಲ್ಲಿ ಇವರು ರಿಕ್ಷಾ ಬಾಡಿಗೆ ಮಾಡುತ್ತಿರುವಾಗ ತಂಡವು ಇವರ ಮೇಲೆ ಹಲ್ಲೆ ನಡೆಸಿದೆ. ಹಲ್ಲೆ ನಡೆಸಿದ ತಂಡ, ನಗರ ವ್ಯಾಪ್ತಿಯಲ್ಲಿ ಎಲ್ಲಿಯೂ ಬಾಡಿಗೆ ಮಾಡಬಾರದು ಎಂದು ಪ್ರತಾಪ್ ಚಂದ್ರ ಅವರಿಗೆ ವಾರ್ನಿಂಗ್ ಮಾಡಿದೆ. ನಗರದಲ್ಲಿ ಬಾಡಿಗೆ ಮಾಡಲು ನನಗೆ ಅನುಮತಿ ಇದೆ ಎಂದು ಪ್ರತಾಪ್ ಚಂದ್ರ ಹೇಳಿದ್ದಾರೆ. ಇದರಿಂದ ಕೋಪಗೊಂಡ ಆಟೋ ಚಾಲಕರು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಚಾಲಕ ಪ್ರತಾಪ್ ಚಂದ್ರ ಸದ್ಯ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ