ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಾಹನ ಜಾಥಾ

ಬಂಟ್ವಾಳ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥಾ ನಡೆಯಿತು.

ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಚಾಲನೆ ನೀಡಿದವರು.

ಪುತ್ತೂರು ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ಸಂತೋಷ್ ಸರಪಾಡಿ, ಸುರೇಶ್ ಬೆಂಜನಪದವು, ಶಿವಪ್ರಸಾದ್ ತುಂಬೆ ಹಾಗೂ ಭಜರಂಗದಳ ಬಂಟ್ವಾಳ ಪ್ರಖಂಡದ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಟ್ವಾಳ ಬೈಪಾಸ್‌ನಿಂದ ಪ್ರಾರಂಭ‌ಗೊಂಡು ಬಿ.ಸಿ.ರೋಡ್ ನಾರಾಯಣ ಗುರು ವೃತ್ತವಾಗಿ ಸಾಗಿ ಕೈಕಂಬ, ಬ್ರಹ್ಮರಕೂಟ್ಲು ತುಂಬೆ ಜಂಕ್ಷನ್‌ನಿಂದ ಕಡೆಗೋಳಿ ತಲುಪಿ ಅಲ್ಲಿಂದ ಪುನಃ ಅದೇ ಮಾರ್ಗವಾಗಿ ಬಿ.ಸಿ.ರೋಡ್ ರಕ್ತೇಶ್ವರಿ ದೇವಾಸ್ಥಾನದಲ್ಲಿ ಸಂಪನ್ನಗೊಂಡಿತು. ಸಾವಿರಾರು ಭಜರಂಗದಳ ಕಾರ್ಯಕರ್ತರು ಈ ವಾಹನ ಜಾಥಾದಲ್ಲಿ ಪಾಲ್ಗೊಂಡು ದೇಶಭಕ್ತಿ‌ಯ ಘೋಷಣೆಗಳನ್ನು ಕೂಗಿದರು.

Related posts

ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ ದಾಖಲೆಯ 750ನೇ ಸಾಂಸ್ಕೃತಿಕ ವೈಭವ

ಜೈಲಿನ ಜಾಮರ್‌ನಿಂದ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ