ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ರೆಕ್ಟರ್ ವಲೇರಿಯನ್ ಮೆಂಡೊನ್ಸಾ ನಿಧನ

ಉಡುಪಿ : ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ವಂ|ವಲೇರಿಯನ್ ಮೆಂಡೋನ್ಸಾ ಅವರು ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.

75ರ ವಯಸ್ಸಿನ ಇವರು ಅತ್ಯಂತ ಉತ್ಸಾಹಿ ಧರ್ಮ ಗುರುಗಳಾಗಿದ್ದರು. ಸದಾ ಹಸನ್ಮುಖಿಯಾಗಿದ್ದ ಇವರು ಕೇವಲ ಕ್ರೈಸ್ತರ ಮಾತ್ರವಲ್ಲದೆ ಎಲ್ಲಾ ಸಮುದಾಯದ ಜನರ ಪ್ರೀತಿಗೆ ಪಾತ್ರರಾಗಿದ್ದರು.

ಶಿರ್ವ ಸಮೀಪದ ಪಿಲಾರ್ ಚರ್ಚಿನಲ್ಲಿ 1949‌ರ ಡಿಸೆಂಬರ್ 9 ರಂದು ಜನಿಸಿದ್ದ ಅವರಿಗೆ 1976 ರ ಮೇ 7 ರಂದು ಗುರುದೀಕ್ಷೆ ಲಭಿಸಿತ್ತು. ಬಳಿಕ ವಿವಿಧ ಚರ್ಚುಗಳಲ್ಲಿ ಸಹಾಯಕ ಧರ್ಮಗುರುಗಳಾಗಿ, ಧರ್ಮಗುರುಗಳಾಗಿ, ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ಸಂಗೀತ ಪ್ರೇಮಿ ಆಗಿದ್ದ ಇವರ ಹಲವು ಧ್ವನಿ ಸುರುಳಿಗಳು ಬಿಡುಗಡೆಯಾಗಿದ್ದವು.

ಅವರು ರೋಮ್‌ನ ಅರ್ಬನ್ ಯೂನಿವರ್ಸಿಟಿಯಿಂದ B.Th ಜೊತೆಗೆ ಇಂಗ್ಲಿಷ್ನಲ್ಲಿ MA ಮತ್ತು ಮೀಡಿಯಾ ಸಂವಹನದಲ್ಲಿ ಡಿಪ್ಲೊಮಾವನ್ನು (ರೇಡಿಯೋ ಮತ್ತು AV ಏಡ್ಸ್) ಪಡೆದರು.

ವಂ|ವಲೇರಿಯನ್ ಮೆಂಡೋನ್ಸಾ ಅವರ ನಿಧನಕ್ಕೆ ಉಡುಪಿ ಧರ್ಮಾಧ್ಯಕ್ಷರಾದ ವಂ|ಜೆರಾಲ್ಡ್ ಐಸಾಕ್ ಲೋಬೊ, ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ|ಡಾ|ರೋಶನ್ ಡಿಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !