ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಮಾಧವ್ ನಾಯ್ಕ್ ನಿಧನ

ಬ್ರಹ್ಮಾವರ : ಹಿರಿಯ ಯಕ್ಷಗಾನ ಕಲಾವಿದರಾದ ಪೇತ್ರಿ ಮಾಧವ್ ನಾಯ್ಕ್ ಅವರು ಬುಧವಾರ ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಬ್ರಹ್ಮಾವರ ತಾಲೂಕಿನ ಪೇತ್ರಿ ಸಮೀಪದ ಹಲುವಳ್ಳಿಯ ವಾಮನ ನಾಯ್ಕ್-ಮೈದಾ ಬಾಯಿ ದಂಪತಿಗಳ ಪುತ್ರನಾಗಿ 1940ರಲ್ಲಿ ಜನಿಸಿದ ಮಾಧವ ನಾಯ್ಕ ಗುರು ತಿಮ್ಮಪ್ಪ ನಾಯ್ಕರ ಮಾರ್ಗದರ್ಶನದಲ್ಲಿ ಯಕ್ಷರಂಗಕ್ಕೆ ಕಾಲಿಟ್ಟರು. ಮಾಧವ ನಾಯ್ಕರು ಎಲ್ಲರಿಗೂ ನೆಚ್ಚಿನ ಕಲಾವಿದರಾಗಿದ್ದು ಹಳೆಯ ಅನುಭವಗಳ ಆಗರವಾಗಿದ್ದರು. ಯಕ್ಷಗಾನದ ಹೆಜ್ಜೆಗಾರಿಕೆ ಅಭ್ಯಾಸ ಮಾಡಿದ ಬಳಿಕ ಆ ಕಾಲದ ಪ್ರಸಿದ್ಧ ಕಲಾವಿದರಾದ ಭಾಗವತ ತೆಂಗಿನಜೆಡ್ಡು ರಾಮಚಂದ್ರ ರಾಯರು, ಗೋರ್ಪಾಡಿ ವಿಟ್ಠಲ ಪಾಟೀಲರು ಇನ್ನಷ್ಟು ಮಾರ್ಗದರ್ಶನ ನೀಡಿದರು.
14ನೇ ವಯಸ್ಸಿನಲ್ಲೆ ಮಾರಣಕಟ್ಟೆ ಮೇಳದಲ್ಲಿ ಗೆಜ್ಜೆ ಕಟ್ಟಿ ಸಾಲಿಗ್ರಾಮ, ಪೆರ್ಡೂರು, ಮೂಲ್ಕಿ, ಅಮೃತೇಶ್ವರಿ ಮೇಳಗಳಲ್ಲಿ 30 ವರ್ಷಗಳ ಕಾಲ ವಿವಿಧ ಪಾತ್ರಗಳಲ್ಲಿ ರಂಜಿಸಿ ಅರ್ಥಪೂರ್ಣ ಕಲಾ ಸೇವೆ ಮಾಡಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ