ರಾಹುಲ್ ಗಾಂಧಿಗೆ ಒಳ್ಳೆ ಬುದ್ಧಿಕೊಡುವಂತೆ ಪೊಳಲಿ ಶ್ರೀದೇವಿಯ ಮೊರೆಹೊಕ್ಕ ವಿಎಚ್‌ಪಿ

ಮಂಗಳೂರು : ಸಂಸತ್ತಿನಲ್ಲಿ ಮೊದಲ ಭಾಷಣ ಮಾಡುತ್ತಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದುತ್ವದ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ವಿಎಚ್‌ಪಿ ಅವರಿಗೆ ಒಳ್ಳೆಯ ಬುದ್ಧಿ ಕೊಡುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮೊರೆಹೊಕ್ಕಿದೆ.

ಸಂಸತ್ತಿನಲ್ಲಿ ಹಿಂದೂ ದೇವರ ನಿಂದನೆ ಹಾಗೂ ಧರ್ಮವಿರೋಧಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿಯವರು ರಾಷ್ಟ್ರೀಯತೆಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ವಿಶ್ವ ಹಿಂದೂ ಪರಿಷತ್ ಮಠ ಮಂದಿರ ಅರ್ಚಕ್ ಪುರೋಹಿತ್ ವತಿಯಿಂದ ಶ್ರೀ ಕ್ಷೇತ್ರ ಪೊಳಲಿ ದೇವಿಯ ಸನ್ನಿಧಾನದಲ್ಲಿ ದೂರು ನೀಡಲಾಗಿದೆ. ಪೊಳಲಿಯ ಪ್ರಧಾನ ಅರ್ಚಕ ಪದ್ಮನಾಭ ಭಟ್ ಮೂಲಕ ದೇವರಲ್ಲಿ ದೂರು ನೀಡಿ, ರಾಹುಲ್ ಗಾಂಧಿಗೆ ಒಳ್ಳೆ ಬುದ್ಧಿಕೊಟ್ಟು, ಹೇಳಿಕೆಗೆ ತಕ್ಕ ಶಿಕ್ಷೆ ನೀಡಲು ಪ್ರಾರ್ಥನೆ ಸಲ್ಲಿಸಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ