ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್

ಮಂಗಳೂರು : ದ.ಕ.ಜಿಲ್ಲಾ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಮಂಗಳವಾರ ಬೆಳಗ್ಗೆ ದೆಹಲಿಯಿಂದ ಪತ್ನಿ‌ ಸಹಿತರಾಗಿ ಹೊರಟ ಅವರು ಮಧ್ಯಾಹ್ನ 1.05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದ್ದಾರೆ. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಉಪರಾಷ್ಟ್ರಪತಿಯವರನ್ನು ಸ್ವಾಗತಿಸಿದರು. ಈ ವೇಳೆ ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಅವರು ಧರ್ಮಸ್ಥಳಕ್ಕೆ ತೆರಳಿದರು‌. ಮಧ್ಯಾಹ್ನ 1.45ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್‍ಗೆ ಆಗಮಿಸುವ ಅವರು, ಧರ್ಮಸ್ಥಳದಲ್ಲಿ ಮೆಗಾ ಕ್ಯೂ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

Related posts

ಆಕಸ್ಮಿಕವಾಗಿ ಬೆಂಕಿ – ಗೋಣಿ ಚೀಲ ಗೋದಾಮು ಸುಟ್ಟು ಭಸ್ಮ…!

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಕಾಪು ಅಮ್ಮನ ಬ್ರಹ್ಮಕಲಶೋತ್ಸವಕ್ಕೆ ಹರಿದ್ವಾರದಿಂದ ಬರಲಿದೆ ಗಂಗಾಜಲ