ಕರಾವಳಿ ಹಿಂದುತ್ವದ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ ಕೋಟ ಗೆಲುವು : ಯಶ್‌ಪಾಲ್ ಸುವರ್ಣ

ಉಡುಪಿ : ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸಂತೋಷ ವ್ಯಕ್ತಪಡಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿಯವರನ್ನು 2,58,903 ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಕ್ಷೇತ್ರದ ಜನತೆ ಕಾಂಗ್ರೆಸ್ ಸರಕಾರದ ಅವೈಜ್ಞಾನಿಕ ಗ್ಯಾರಂಟಿ ಭಾಗ್ಯಗಳನ್ನು ವಿರೋಧಿಸಿ, ಹಿಂದೂ ವಿರೋಧಿ ನೀತಿಗೆ ದಿಟ್ಟ ಉತ್ತರ ನೀಡಿ ಸಿದ್ಧರಾಮಯ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 45,000 ಅಂತರದ ಮುನ್ನಡೆ ನೀಡಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷಗಳ ಸಾಧನೆಗೆ ಜನ ಮನ್ನಣೆ ನೀಡಿದ್ದಾರೆ . ಮುಂದಿನ ದಿನಗಳಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೋಟ ಶ್ರೀನಿವಾಸ ಪೂಜಾರಿಯವರು ಸಮರ್ಥ ಸಂಸದರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು