ವಿಧಾನ ಪರಿಷತ್ ಉಪಚುನಾವಣೆ : 5 ನಾಮಪತ್ರ ಕ್ರಮಬದ್ಧ

ಮಂಗಳೂರು : ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದಿಂದ ನಡೆಯುವ ಉಪ ಚುನಾವಣೆಗೆ ನಾಮಪತ್ರ ಪರಿಶೀಲನೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ನಾಮಪತ್ರ ಪರಿಶೀಲನೆ ನಡೆಸಿದರು.

ಕಿಶೋರ್ ಬಿ.ಆರ್ (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಅನ್ವರ್ ಸಾದತ್.ಎಸ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ), ಮುಹಮ್ಮದ್ ರಿಯಾಝ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಮತ್ತು ದಿನಕರ ಉಳ್ಳಾಲ್ (ಪಕ್ಷೇತರ) ಅವರ ನಾಮಪತ್ರಗಳು ಕ್ರಮಬದ್ಧವಾಗಿದೆ.

ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಅಕ್ಟೋಬರ್ 7 ಕೊನೆಯ ದಿನವಾಗಿದೆ ಎಂದು ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related posts

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ